Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ಕೇಳಿ ನಮ್ಮ ದುರವಸ್ಥೆಯನ್ನೂ ಕಷ್ಟವನ್ನೂ ಉಪದ್ರವವನ್ನೂ ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಟ್ಟೆವು. ಆತನು ನಮ್ಮ ಕೂಗನ್ನು ಆಲಿಸಿದನು; ನಮ್ಮ ಸಂಕಟ, ವೇದನೆಗಳನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:7
18 ತಿಳಿವುಗಳ ಹೋಲಿಕೆ  

ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಲೋಕವನ್ನು ಸೃಷ್ಟಿಸಿ, ರೂಪಿಸಿ, ಸ್ಥಾಪಿಸಿದವರು ಹಾಗೂ ‘ಸರ್ವೇಶ್ವರ’ ಎಂದು ನಾಮಾಂಕಿತಗೊಂಡ ಅವರು ನನಗೆ ಹೀಗೆಂದರು:


ನಿನ್ನ ನಾಮಪ್ರಿಯರಿಗೆ ಮಾಡುವಂತೆ I ನನಗಭಿಮುಖನಾಗಿ ತೋರು ನೀ ಮಮತೆ II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ಈಜಿಪ್ಟಿನವರು ಗುಲಾಮರನ್ನಾಗಿಸಿಕೊಂಡಿರುವ ಇಸ್ರಯೇಲರ ಗೋಳು ನನಗೆ ಕೇಳಿಸಿದೆ. ನಾನು ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡಿದ್ದೇನೆ.


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು