Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:8 - ಕನ್ನಡ ಸತ್ಯವೇದವು C.L. Bible (BSI)

8 ಭುಜಬಲ, ಶಿಕ್ಷಾಹಸ್ತ, ಮಹಾಭೀತಿ, ಮಹತ್ಕಾರ್ಯ, ಸೂಚಕಕಾರ್ಯ, ಇವುಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಭುಜಬಲವನ್ನೂ ಶಿಕ್ಷಾಹಸ್ತವನ್ನೂ ಮಹಾಭೀತಿಗಳನ್ನೂ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ಪ್ರಯೋಗಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಮೇಲೆ ಯೆಹೋವನು ತನ್ನ ಭುಜಪರಾಕ್ರಮದಿಂದ ನಮ್ಮನ್ನು ಈಜಿಪ್ಟಿನಿಂದ ಹೊರತಂದನು. ಆತನು ಅದ್ಭುತಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:8
15 ತಿಳಿವುಗಳ ಹೋಲಿಕೆ  

ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾದ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದ್ದರು.


ಇಸ್ರಯೇಲರ ಕಣ್ಮುಂದೆ ವಿಶೇಷ ಭುಜಪರಾಕ್ರಮವನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು. ಇಂಥವನಿಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಈಚೆಗೆ ಇಸ್ರಯೇಲರಲ್ಲಿ ಹುಟ್ಟಲೇ ಇಲ್ಲ.


ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು