Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:15 - ಕನ್ನಡ ಸತ್ಯವೇದವು C.L. Bible (BSI)

15 ‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:15
44 ತಿಳಿವುಗಳ ಹೋಲಿಕೆ  

“ನಿಮಗಾಗಿ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ.


ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.


‘ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಅಥವಾ ವಿಗ್ರಹವನ್ನೂ ಮಾಡಿಕೊಳ್ಳಬೇಡ.


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


“ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ಜುದೇಯದವರು ಸಹ ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಯೇಲರ ಪದ್ಧತಿಯನ್ನು ಅನುಸರಿಸಿದ್ದರಿಂದ,


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ, ಕಲ್ಲು, ಬೆಳ್ಳಿ, ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೀವು ಖಂಡಿತವಾಗಿ ನೋಡಿದ್ದೀರಿ.


ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.


ರಾಖೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು, ಅವುಗಳ ಮೇಲೆ ಕುಳಿತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನುಗಳನ್ನೆಲ್ಲ ಮುಟ್ಟಿ ಮುಟ್ಟಿ ನೋಡಿದನು. ವಿಗ್ರಹಗಳು ಕಾಣಲಿಲ್ಲ.


ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.


“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”


“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ನೀನು ಅವರಿಗೆ ಹೇಳಬೇಕಾದುದು - ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ ಅವರಿಗೆ ‘ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.


“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.


“ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.


“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಯೇಲರೆಲ್ಲರಿಗೆ,


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


“ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ಅವನು ಆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಟ್ಟನು.ಆಕೆ, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ. ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುತ್ತೇನೆ,” ಎಂದು ಹೇಳಿ


ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.


ಬಡಗಿಯು ಮರಕ್ಕೆ ನೂಲು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ; ಕೈವಾರದಿಂದ ಗುರುತಿಸುತ್ತಾನೆ, ಉಳಿ ಬಾಚಿಗಳಿಂದ ಕೆತ್ತುತ್ತಾನೆ; ಸುಂದರವಾದ ನರನಂತೆ ರೂಪಿಸಿ ಮಂದಿರದಲ್ಲಿ ಇಡಲು ಯೋಗ್ಯವಾಗುವಂತೆ ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು