Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:25 - ಕನ್ನಡ ಸತ್ಯವೇದವು C.L. Bible (BSI)

25 “ಅವರು, ‘ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು - ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:25
13 ತಿಳಿವುಗಳ ಹೋಲಿಕೆ  

ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


("ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.


“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.


“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.


ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು