Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:6 - ಕನ್ನಡ ಸತ್ಯವೇದವು C.L. Bible (BSI)

6 ಉಳಿ ಮುಂತಾದುದನ್ನು ಉಪಯೋಗಿಸದೆ ಹುಟ್ಟು ಕಲ್ಲುಗಳಿಂದಲೇ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠವನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಡಿದ ಕಲ್ಲುಗಳಿಂದ ಯಜ್ಞವೇದಿಕೆಯನ್ನು ಕಟ್ಟಬಾರದು. ಆ ಯಜ್ಞವೇದಿಕೆಯ ಮೇಲೆ ನಿಮ್ಮ ದೇವರಾದ ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠವನ್ನು ಹುಟ್ಟುಕಲ್ಲುಗಳಿಂದಲೇ ಕಟ್ಟಬೇಕು. ನೀವು ಅದರ ಮೇಲೆ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:6
6 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


“ಅಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ನೀವು ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿಸಬೇಕು.


ಅಲ್ಲಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿ ಸಹಭೋಜನ ಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು