Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:1 - ಕನ್ನಡ ಸತ್ಯವೇದವು C.L. Bible (BSI)

1 “ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:1
31 ತಿಳಿವುಗಳ ಹೋಲಿಕೆ  

ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.


“ಸರ್ವೇಶ್ವರನಾದ ನಾನು ಹೇಳುವ ಮಾತಿದು : ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ,


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.


ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ, ಆಶೀರ್ವಾದ ನಿಮ್ಮದಾಗುವುದು.


ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ಹೋಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು; ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.


ಹೀಗೆ ದಾವೀದನು ದೇವಪ್ರಜೆಗಳಾದ ಇಸ್ರಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿ ತನ್ನನ್ನು ಇಸ್ರಯೇಲ್ ರಾಜನನ್ನಾಗಿ ಸ್ಥಿರಪಡಿಸುವರೆಂದು ತಿಳಿದುಕೊಂಡನು.


ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ, ‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು