Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:11 - ಕನ್ನಡ ಸತ್ಯವೇದವು C.L. Bible (BSI)

11 “ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮಗೆ ಸಂತಾನಪಶುವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:11
10 ತಿಳಿವುಗಳ ಹೋಲಿಕೆ  

ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ನನ್ನುಸಿರು ನನ್ನ ಧರ್ಮಪತ್ನಿಗೆ ಅಸಹ್ಯವಾಗಿದೆ ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೇ ಹೇಸಿಕೆಯಾದೆ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು