ಧರ್ಮೋಪದೇಶಕಾಂಡ 28:13 - ಕನ್ನಡ ಸತ್ಯವೇದವು C.L. Bible (BSI)13-14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ಹೋಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು; ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13-14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ತೊಲಗದೆ ಬೇರೆ ದೇವರುಗಳನ್ನು ಅವಲಂಬಿಸದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು; ನೀವು ಎಲ್ಲರಿಗಿಂತಲೂ ಮೇಲಣವರಾಗಿರುವಿರೇ ಹೊರತು ಕೆಳಗಣವರಾಗಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರುವಿರಿ, ಕೆಳಗಿನದರಲ್ಲಿ ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.