Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:15 - ಕನ್ನಡ ಸತ್ಯವೇದವು C.L. Bible (BSI)

15 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:15
31 ತಿಳಿವುಗಳ ಹೋಲಿಕೆ  

ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಕೆಳಕಂಡ ಶುಭಗಳೆಲ್ಲ ನಿಮಗೆ ಪ್ರಾಪ್ತವಾಗುವುವು:


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ


ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.


ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.


ಈ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ, ನಿಮಗೆ ಶಾಪ ತಗಲುವುದು.


ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.


ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಆದರೆ ನೀವು ದ್ರೋಹಿಗಳಾಗಿ, ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈ ಮುಗಿಯುವುದಾದರೆ,


ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.


‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”


ಆಗ ರಕ್ಷಾದಳದ ಆ ನಾಯಕ ಯೆರೆಮೀಯನನ್ನು ಕರೆಯಿಸಿ, “ನಿನ್ನ ದೇವರಾದ ಸರ್ವೇಶ್ವರನು ಈ ನಾಡಿಗೆ ಇಂಥ ಕೇಡು ಬಂದೊದಗಲಿ ಎಂದು ಶಾಪಹಾಕಿದ್ದ.


ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.


ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”


“ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ,


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು