Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:16 - ಕನ್ನಡ ಸತ್ಯವೇದವು C.L. Bible (BSI)

16 “ನಿಮಗೆ ಊರಲ್ಲೂ ಅಡವಿಯಲ್ಲೂ ಅಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮಗೆ ಊರಿನಲ್ಲಿಯೂ ಮತ್ತು ಅಡವಿಯಲ್ಲಿಯೂ ಶಾಪ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮಗೆ ಊರಲ್ಲಿಯೂ ಅಡವಿಯಲ್ಲಿಯೂ ಅಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಿಮ್ಮ ಹೊಲದಲ್ಲಿಯೂ ನೀವು ವಾಸಿಸುವ ಪಟ್ಟಣದಲ್ಲಿಯೂ ಯೆಹೋವನು ನಿಮ್ಮನ್ನು ಶಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮಗೆ ಪಟ್ಟಣದಲ್ಲಿಯೂ ಶಾಪ, ಹೊಲದಲ್ಲಿಯೂ ನಿಮಗೆ ಶಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:16
32 ತಿಳಿವುಗಳ ಹೋಲಿಕೆ  

ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ದುರುಳರ ಮನೆಯನ್ನು ಸರ್ವೇಶ್ವರ ಶಪಿಸುವನು; ನೀತಿವಂತರ ನಿವಾಸವನ್ನು ಆತ ಆಶೀರ್ವದಿಸುವನು.


ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”


ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೆರೀತ್ ಹಳ್ಳದಲ್ಲಿ ಅವನು ವಾಸಿಸಿದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.


“ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು