Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:22 - ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ನಿಮ್ಮನ್ನು ಕ್ಷಯರೋಗ ಚಳಿಜ್ವರ ಉರಿತ ಉಷ್ಣಜ್ವರಗಳಿಂದಲೂ ದೇಶವನ್ನು ಕ್ಷಾಮದಿಂದಲೂ ಬೆಳೆಯನ್ನು ಕಾಡಿಗೆ ಬಿಸಿಗಾಳಿಗಳಿಂದಲೂ ಬಾಧಿಸಲಾಗಿ ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ಹತ್ತುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:22
14 ತಿಳಿವುಗಳ ಹೋಲಿಕೆ  

“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


“ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ,


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


“ನಾಡಿಗೆ ಕ್ಷಾಮ, ಘೋರವ್ಯಾಧಿ, ಬೆಳೆಗೆ ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೆಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆಯುಂಟಾದರೆ


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ಆಮೇಲೆ ಆಕಾಶ ಮಳೆ ಸುರಿಸದೆ ತಾಮ್ರದಂತೆಯೂ ಕೆಳಗೆ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವುವು.


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”


ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.


ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿಹೋಯಿತು.


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು