Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:31 - ಕನ್ನಡ ಸತ್ಯವೇದವು C.L. Bible (BSI)

31 ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮೆದುರಾಗಿ ಬಲಾತ್ಕಾರದಿಂದ ಹಿಡಿದುಕೊಂಡುಹೋಗಿ ನಿಮಗೆ ಹಿಂದಕ್ಕೆ ಕೊಡುವದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆಯೇ ಕೊಯ್ಯುವರು, ಆದರೆ ನೀವು ಅದರ ಮಾಂಸ ತಿನ್ನುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಕಣ್ಣ ಮುಂದೆಯೇ ಬಲಾತ್ಕಾರದಿಂದ ತೆಗೆದುಕೊಂಡು ಹೋಗುವರು. ಅದು ನಿಮಗೆ ಮತ್ತೆ ಸಿಕ್ಕುವುದಿಲ್ಲ. ನಿಮ್ಮ ಕುರಿಗಳು ನಿಮ್ಮ ಶತ್ರುವಿಗೆ ಕೊಡಲಾಗುವುದು. ಅವುಗಳನ್ನು ಬಿಡಿಸುವುದಕ್ಕೆ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:31
8 ತಿಳಿವುಗಳ ಹೋಲಿಕೆ  

ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.


“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.


ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.


ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ.


ಅವನ ಮನೆಯ ಧನಧಾನ್ಯ ಹಾಳಾಗುವುದು ದೇವರ ಸಿಟ್ಟಿನಾದಿನ ನೀರುಪಾಲಾಗುವುದು.


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು