Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:32 - ಕನ್ನಡ ಸತ್ಯವೇದವು C.L. Bible (BSI)

32 ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಿಮ್ಮ ಪುತ್ರಪುತ್ರಿಯರು ಬೇರೆ ಜನರಿಗೆ ವಶಪಡಿಸಿರಲು, ನೀವು ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಇರುವಿರಿ. ಆದರೆ ಅವರನ್ನು ಕಾಪಾಡಲು ನಿಮ್ಮ ಕೈಯಿಂದ ಸಾಧ್ಯವಾಗದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:32
25 ತಿಳಿವುಗಳ ಹೋಲಿಕೆ  

ಜುದೇಯ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ; ಅವರನ್ನು ತಾಯ್ನಾಡಿನಿಂದ ದೂರಮಾಡಿದ್ದೀರಿ.


ನಿಮಗೆ ಗಂಡುಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವರು; ನಿಮ್ಮ ಬಳಿ ಅವರು ಇರರು.


ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಗೆ ತುತ್ತಾಗಿದ್ದಾರೆ. ನಮ್ಮ ಗಂಡುಹೆಣ್ಣುಮಕ್ಕಳೂ ಹೆಂಡತಿಯರೂ ಸೆರೆಯಾಳುಗಳಾಗಿ ಹೋಗಬೇಕಾಯಿತು.


ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.


ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಮಂದವಾಯಿತೆನ್ನ ನೇತ್ರ ನಿನ್ನ ರಕ್ಷಣೆಗಾಗಿ ಕಾಯುತ I ನೀತಿಯುತ ನಿನ್ನ ನುಡಿ ಈಡೇರುವುದನು ನಿರೀಕ್ಷಿಸುತ II


ನಿನ್ನ ವಾಗ್ದಾನದ ನಿರೀಕ್ಷೆಯಲೆ ನನ್ನ ಕಣ್ಣು ಸೊರಗಿವೆ I “ನನಗೆಂದು ನೀಡುವೆ ಸಾಂತ್ವನ?” ಎಂದು ನಾ ಕೇಳುತ್ತಿರುವೆ II


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.


ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.


ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.


ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ನಾನು ಬಿತ್ತಿದ್ದನ್ನು ಮತ್ತೊಬ್ಬ ಉಣ್ಣಲಿ ನನ್ನ ಬೆಳೆಯು ಬುಡಮೇಲಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು