Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:33 - ಕನ್ನಡ ಸತ್ಯವೇದವು C.L. Bible (BSI)

33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:33
18 ತಿಳಿವುಗಳ ಹೋಲಿಕೆ  

ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.


ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ.


ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ನಿಮ್ಮ ಮುಂದೆ ನಡೆಯುವ ದೃಶ್ಯಗಳನ್ನು ನೋಡಿ ಹುಚ್ಚರಾಗಿಹೋಗುವಿರಿ.


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರ ವಶವಾಗುವಂತೆ ಮಾಡುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿನ್ನುವರು; ನಿನ್ನ ಹಾಲನ್ನು ಕುಡಿಯುವರು,


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.


ತಾನು ದುಡಿದು ಗಳಿಸಿದ್ದನ್ನು ತಿಂದು ಅನುಭವಿಸಲಾರನು ಅದು ಪರರ ಪಾಲಾಗುವುದು ವ್ಯಾಪಾರದಿಂದ ಬಂದ ವರಮಾನ ಅವನಿಗೆ ಆನಂದ ತರದು.


ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು