Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:38 - ಕನ್ನಡ ಸತ್ಯವೇದವು C.L. Bible (BSI)

38 “ಹೊಲದಲ್ಲಿ ನೀವು ಎಷ್ಟು ಬೀಜ ಬಿತ್ತಿದರೂ ಮಿಡತೆಯ ದಂಡುಬಂದು ಅದನ್ನು ತಿಂದುಬಿಡುವುದು; ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ವಿುಡತೆಯ ದಂಡು ಬಂದು ಅದನ್ನು ತಿಂದು ಬಿಡುವದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 “ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಬಹಳ ಬೀಜವನ್ನು ಹೊಲದಲ್ಲಿ ಬಿತ್ತಿದರೂ ಸ್ವಲ್ಪವೇ ಬೆಳೆ. ಏಕೆಂದರೆ ಮಿಡತೆ ಅದನ್ನು ತಿಂದುಬಿಡುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:38
15 ತಿಳಿವುಗಳ ಹೋಲಿಕೆ  

ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಎಂಟು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ನೂರೆಂಬತ್ತು ಲೀಟರ್ ಬೀಜಬಿತ್ತಿದರೆ, ಕೇವಲ ಹದಿನೆಂಟು ಲೀಟರ್ ಧಾನ್ಯ ಮಾತ್ರ ಸಿಗುವುದು.


ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರಮಾಡುವೆನು.


ನಿಮ್ಮ ಗಿಡಮರಗಳೂ ಪಚ್ಚೆಪೈರುಗಳೂ ಮಿಡತೆಯ ಪಾಲಾಗುವುವು.


“ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ,


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.


ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು