Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:4 - ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಸಂತಾನಕ್ಕೂ ನಿಮ್ಮ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:4
16 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.


ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.


ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II


“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


“ನಿಮಗೆ ಊರಲ್ಲೂ ಅಡವಿಯಲ್ಲೂ ಶುಭವುಂಟಾಗುವುದು.


ನಿಮ್ಮ ಧಾನ್ಯಕ್ಕೂ ಅದರಿಂದ ಮಾಡುವ ಭೋಜನಕ್ಕೂ ಶುಭ ಉಂಟಾಗುವುದು.


ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು