Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:40 - ಕನ್ನಡ ಸತ್ಯವೇದವು C.L. Bible (BSI)

40 ನಿಮ್ಮ ದೇಶಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುವು; ಮೈಗೆ ಹಚ್ಚಿಕೊಳ್ಳಲು ಎಣ್ಣೆ ಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಿಮ್ಮ ಭೂಮಿಯಲ್ಲಿ ಆಲಿವ್ ಮರಗಳು ತುಂಬಿದ್ದರೂ ಎಣ್ಣೆಯ ಬರದಲ್ಲಿ ಸಂಕಟಪಡುವಿರಿ. ಯಾಕೆಂದರೆ ಆಲಿವ್ ಕಾಯಿಗಳು ಭೂಮಿಯ ಮೇಲೆ ಉದುರಿಬಿದ್ದು ಹಾಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಓಲಿವ್ ಮರಗಳು ನಿಮ್ಮ ಎಲ್ಲಾ ಮೇರೆಗಳಲ್ಲಿ ಇರುವುವು. ಆದರೆ ಅವುಗಳ ಕಾಯಿಗಳು ಉದುರುವುದರಿಂದ ನಿಮ್ಮ ಉಪಯೋಗಕ್ಕೆ ಎಣ್ಣೆ ಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:40
4 ತಿಳಿವುಗಳ ಹೋಲಿಕೆ  

ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು