Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:41 - ಕನ್ನಡ ಸತ್ಯವೇದವು C.L. Bible (BSI)

41 ನಿಮಗೆ ಗಂಡುಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವರು; ನಿಮ್ಮ ಬಳಿ ಅವರು ಇರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಿಮಗೆ ಗಂಡು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವದರಿಂದ ನಿಮ್ಮ ಬಳಿಯಲ್ಲಿ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಿಮಗೆ ಗಂಡುಹೆಣ್ಣು ಮಕ್ಕಳು ಹುಟ್ಟುವರು. ಆದರೆ ಅವರು ನಿಮ್ಮೊಂದಿಗೆ ಇರುವುದಿಲ್ಲ. ಅವರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನೀವು ಪುತ್ರಪುತ್ರಿಯರನ್ನು ಪಡೆಯುವಿರಿ, ಆದರೆ ಅವರ ಕೂಡ ಸಂತೋಷಿಸುವುದಿಲ್ಲ. ಏಕೆಂದರೆ ಅವರು ಸೆರೆಯಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:41
8 ತಿಳಿವುಗಳ ಹೋಲಿಕೆ  

ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.


ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ ! ಅದರ ಶತ್ರುಗಳಿಗೋ ಸುಖಸಮೃದ್ಧಿ ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ !


ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.


ಇದಲ್ಲದೆ, ಇಸ್ರಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು, ಸಮಾರಿಯಕ್ಕೆ ಒಯ್ದರು.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಯೇಲರಲ್ಲಿ, ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ ಕೆಲವು ಯುವಕರನ್ನು ಇಲ್ಲಿಗೆ ಕರೆದು ಬಾ.


ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು