ಧರ್ಮೋಪದೇಶಕಾಂಡ 28:48 - ಕನ್ನಡ ಸತ್ಯವೇದವು C.L. Bible (BSI)48 ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು. ಅಧ್ಯಾಯವನ್ನು ನೋಡಿ |