Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:62 - ಕನ್ನಡ ಸತ್ಯವೇದವು C.L. Bible (BSI)

62 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆಹೋದದರಿಂದ ಸ್ವಲ್ಪಮಂದಿಯೇ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೇ ಹೋದದ್ದರಿಂದ, ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯಾತರಾಗಿರುವ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:62
18 ತಿಳಿವುಗಳ ಹೋಲಿಕೆ  

ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.


ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ಪಟ್ಟಣವೇನೊ ಸವಿಸ್ತಾರವಾಗಿತ್ತು. ಆದರೆ ಅದರೊಳಗಿದ್ದ ಜನ ಬಹಳ ಸ್ವಲ್ಪಮಂದಿ. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.


ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.


ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸಂಖ್ಯೆಯಲ್ಲಿ ಹೆಚ್ಚಿಸಿದ್ದಾರೆ; ನೀವು ಆಕಾಶದ ನಕ್ಷತ್ರಗಳಷ್ಟಾಗಿದ್ದೀರಿ;


ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮ್ಮನ್ನು ಹೆಚ್ಚಿಸಲಿ; ಅವರೇ ವಾಗ್ದಾನಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ;


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು