Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:65 - ಕನ್ನಡ ಸತ್ಯವೇದವು C.L. Bible (BSI)

65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವದಕ್ಕೂ ಸ್ಥಳ ಸಿಕ್ಕುವದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ ದಿಕ್ಕು ತೋರದೆ ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 “ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:65
21 ತಿಳಿವುಗಳ ಹೋಲಿಕೆ  

“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಅವರ ಕಣ್ಣು ಕುರುಡಾಗಲಿ ನಿರಂತರ ಭಾರದಿಂದ ಬೆನ್ನು ಗೂನಾಗಲಿ.”


ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು.


ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.


ಇವೆಲ್ಲವೂ ಪ್ರಸವ ವೇದನೆಯ ಪ್ರಾರಂಭ ಮಾತ್ರ.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಅವರ ಮನಸ್ಸನ್ನು ಮಂಕುಮಾಡು ಅವರಿಗೆ ನಿನ್ನ ಶಾಪ ತಗಲುವಂತೆ ಮಾಡು.


ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ.


ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.


ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”


ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು