Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:68 - ಕನ್ನಡ ಸತ್ಯವೇದವು C.L. Bible (BSI)

68 ನೀವು ಈಜಿಪ್ಟ್ ದೇಶವನ್ನು ಮರಳಿ ಎಂದಿಗೂ ನೋಡುವುದಿಲ್ಲವೆಂದು ಸರ್ವೇಶ್ವರ ಹೇಳಿದ್ದರೂ ಅವರು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗಮಾಡುವರು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನೇ ಗಂಡು ಹೆಣ್ಣು ಎನ್ನದೆ ಗುಲಾಮರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ನೀವು ಐಗುಪ್ತದೇಶವನ್ನು ತಿರಿಗಿ ಎಂದಿಗೂ ನೋಡುವದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರಿಗಿ ಹೋಗಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು. ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:68
14 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.


ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.


ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.


ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.


“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ಮನಸ್ಸಿನಲ್ಲಿ ನಿರಂತರ ಪ್ರಾಣಭಯವಿರುವುದರಿಂದ ಹಾಗು ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದ ನೀವು ಹೊತ್ತಾರೆಯಲ್ಲೇ, ‘ಅಯ್ಯೋ, ಅಯ್ಯೋ, ಸಾಯಂಕಾಲ ಯಾವಾಗ ಬರುವುದೋ?’ ಎಂದೂ ಸಾಯಂಕಾಲದಲ್ಲಿ, ‘ಅಯ್ಯೋ, ಅಯ್ಯೋ, ಮರುದಿನ ಯಾವಾಗ ಬರುವುದೋ?’ ಎಂದೂ ಕೊರಗುವಿರಿ.


ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:


ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು