Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:7 - ಕನ್ನಡ ಸತ್ಯವೇದವು C.L. Bible (BSI)

7 “ನಿಮ್ಮ ಮೇಲೆ ಎರಗುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಸರ್ವೇಶ್ವರ ಮಾಡುವರು; ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮಗೆ ವಿರೋಧವಾಗಿ ಏಳುವ ನಿಮ್ಮ ಶತ್ರುಗಳನ್ನು ಯೆಹೋವ ದೇವರು ನಿಮ್ಮ ಮುಂದೆಯೇ ಸೋಲಿಸಿಬಿಡುವರು. ಅವರು ಒಂದೇ ಮಾರ್ಗದಲ್ಲಿ ನಿಮಗೆ ವಿರೋಧವಾಗಿ ಹೊರಟು ಬಂದರೂ, ಏಳು ಮಾರ್ಗಗಳಿಂದ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:7
21 ತಿಳಿವುಗಳ ಹೋಲಿಕೆ  

ಅವನ ಶತ್ರುಗಳನು ಸದೆಬಡಿವೆನು ಅವನ ಮುಂದೆಯೆ I ಅವನ ವಿರೋಧಿಗಳನು ಹತಮಾಡುವೆನು ಅಲ್ಲಿಯೇ II


ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸವಾಗಿದ್ದು, ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಯಿಮ್ ಪರ್ವತದವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಜರ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಸಿದನು.


ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಶುಭವುಂಟಾಗುವುದು.


“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.


ಸಾಯಂಕಾಲವಾದಾಗ ಅವರು ಸಿರಿಯಾದವರ ಪಾಳೆಯಕ್ಕೆ ಹೊರಟರು; ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.


ಅವರನು ಮತ್ತೆ ಏಳದಂತೆ ಹೊಡೆದೆ I ಅವರು ಕಾಲಿಗೆ ಬೀಳುವಂತೆ ಮಾಡಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು