ಧರ್ಮೋಪದೇಶಕಾಂಡ 28:9 - ಕನ್ನಡ ಸತ್ಯವೇದವು C.L. Bible (BSI)9 “ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ತನ್ನ ವಾಗ್ದಾನಕ್ಕನುಸಾರವಾಗಿ ವಿಶೇಷವಾದ ಸ್ವಕೀಯ ಪ್ರಜೆಗಳನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.