ಧರ್ಮೋಪದೇಶಕಾಂಡ 29:1 - ಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ: ಅಧ್ಯಾಯವನ್ನು ನೋಡಿ |
ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.