Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:18 - ಕನ್ನಡ ಸತ್ಯವೇದವು C.L. Bible (BSI)

18 “ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:18
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಆದುದರಿಂದ ಈ ಜನರು ಕಹಿಯಾದ ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು; ವಿಷ ಬೆರೆತ ನೀರನ್ನು ಕುಡಿಯುವಂತೆ ಮಾಡುವೆನು.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ನೀನು ದ್ವೇಷಾಸೂಯೆಯಿಂದ ತುಂಬಿರುವೆ; ಪಾಪಕ್ಕೆ ದಾಸನಾಗಿರುವೆ,” ಎಂದನು.


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ.


ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


ದುರುಳನು ನಿನ್ನನಲಕ್ಷ್ಯ ಮಾಡುವುದೆಂತು? I “ದೇವನೆನ್ನ ವಿಚಾರಿಸನು” ಎನ್ನುವುದೆಂತು? II


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು