ಧರ್ಮೋಪದೇಶಕಾಂಡ 29:19 - ಕನ್ನಡ ಸತ್ಯವೇದವು C.L. Bible (BSI)19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು. ಅಧ್ಯಾಯವನ್ನು ನೋಡಿ |
ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.