ಧರ್ಮೋಪದೇಶಕಾಂಡ 29:20 - ಕನ್ನಡ ಸತ್ಯವೇದವು C.L. Bible (BSI)20 ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20-21 ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು. ಅಧ್ಯಾಯವನ್ನು ನೋಡಿ |