Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:21 - ಕನ್ನಡ ಸತ್ಯವೇದವು C.L. Bible (BSI)

21 ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಸರ್ವೇಶ್ವರ ಅವನನ್ನು ಇಸ್ರಯೇಲರ ಎಲ್ಲ ಕುಲಗಳಿಂದ ಪ್ರತ್ಯೇಕಿಸಿ, ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈ ನಿಯಮದ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಯೆಹೋವ ದೇವರು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:21
12 ತಿಳಿವುಗಳ ಹೋಲಿಕೆ  

“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.


ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


ಇಷ್ಟುಮಾತ್ರವಲ್ಲದೆ, ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು