Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:22 - ಕನ್ನಡ ಸತ್ಯವೇದವು C.L. Bible (BSI)

22 “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಮುಂದಿನ ದಿವಸಗಳಲ್ಲಿ ನಿಮ್ಮ ಸಂತತಿಯವರೂ ದೂರದೇಶದ ಪರದೇಶಸ್ಥರೂ ನಿಮ್ಮ ದೇಶವು ಹೇಗೆ ಹಾಳಾಗಿ ಹೋಯಿತು ಎಂಬುದನ್ನು ನೋಡುವರು. ಯೆಹೋವನು ದೇಶಕ್ಕೆ ತಂದ ವ್ಯಾಧಿಗಳನ್ನು ಅವರು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ, ದೂರದೇಶದಿಂದ ಬರುವ ಅನ್ಯನೂ, ಆ ದೇಶದ ವಿಪತ್ತುಗಳನ್ನೂ, ಯೆಹೋವ ದೇವರು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:22
9 ತಿಳಿವುಗಳ ಹೋಲಿಕೆ  

ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


“ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.


ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.


ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.


ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !


ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು