Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:23 - ಕನ್ನಡ ಸತ್ಯವೇದವು C.L. Bible (BSI)

23 ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:23
26 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.


ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು.


ಈಗ ಲವಣ ಸಮುದ್ರ ಎನಿಸಿಕೊಳ್ಳುವ ಸಿದ್ದೀಮ್ ತಗ್ಗುಪ್ರದೇಶದಲ್ಲಿ ಒಂದುಗೂಡಿದ್ದ ಸೊದೋಮಿನ ಅರಸ ಬೆರಗ, ಗೊಮೋರದ ಅರಸ ಬಿರ್ಶಗ, ಅದ್ಮಾಹದ ಅರಸ ಶಿನಾಬ, ಚೆಬೋಯಿಮನ ಅರಸ ಶೆಮೇಬರ, ಬೆಲಗಿನ (ಅಂದರೆ ಚೋಗರದ) ಅರಸ - ಈ ಐವರೊಡನೆ ಯುದ್ಧಮಾಡಿದರು.


ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಆದರೆ ಅದರ ಸುತ್ತಣ ಜವುಗುನೆಲವೂ ಸವುಳುಹೊಂಡಗಳೂ ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವುವು.


ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !


ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಅನ್ಯಜನರು ವಾಸಮಾಡುವರು ಅವನ ಗುಡಾರದೊಳಗೆ ಗಂಧಕವನ್ನು ಸುರಿಸಲಾಗುವುದು ಅವನ ಮನೆಯ ಮೇಲೆ.


ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.


ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.


ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.


ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.


ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು