Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:24 - ಕನ್ನಡ ಸತ್ಯವೇದವು C.L. Bible (BSI)

24 ‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು? ಎಂಬದಾಗಿ ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು?’ ಎಂದು ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:24
16 ತಿಳಿವುಗಳ ಹೋಲಿಕೆ  

ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”


ವೈರಿಗಳೂ ವಿರೋಧಿಗಳೂ ಜೆರುಸಲೇಮಿನ ಬಾಗಿಲೊಳಗೆ ಕಾಲಿಡುವರೆಂದು ವಿಶ್ವದ ರಾಜರಾಗಲಿ, ನಿವಾಸಿಗಳಾಗಲಿ ನಂಬಿರಲಿಲ್ಲ ಯಾರೂ.


“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.


‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.”


“ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು.


ಆಗ ರಕ್ಷಾದಳದ ಆ ನಾಯಕ ಯೆರೆಮೀಯನನ್ನು ಕರೆಯಿಸಿ, “ನಿನ್ನ ದೇವರಾದ ಸರ್ವೇಶ್ವರನು ಈ ನಾಡಿಗೆ ಇಂಥ ಕೇಡು ಬಂದೊದಗಲಿ ಎಂದು ಶಾಪಹಾಕಿದ್ದ.


ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು