Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:4 - ಕನ್ನಡ ಸತ್ಯವೇದವು C.L. Bible (BSI)

4 ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:4
18 ತಿಳಿವುಗಳ ಹೋಲಿಕೆ  

ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಉಂಟುಮಾಡಿದವ ಸರ್ವೇಶ್ವರ.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು