Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:5 - ಕನ್ನಡ ಸತ್ಯವೇದವು C.L. Bible (BSI)

5 ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾಲ್ಪತ್ತು ವರುಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡಿಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ ಕಾಲಲ್ಲಿದ್ದ ಕೆರವಾಗಲಿ ಜೀರ್ಣವಾಗಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಮೈಮೇಲಿದ್ದ ಬಟ್ಟೆಗಳು ಹರಿದುಹೋಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನಾನು ನಲವತ್ತು ವರ್ಷ ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿದೆನು. ನಿಮ್ಮ ಮೇಲಿರುವ ವಸ್ತ್ರಗಳು ಹರಿಯಲಿಲ್ಲ. ನಿಮ್ಮ ಪಾದಗಳಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:5
13 ತಿಳಿವುಗಳ ಹೋಲಿಕೆ  

ಈ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದುಹೋಗಲಿಲ್ಲ.


ಈ ಪರಿ ಸಲಹಿದಿರಿ ಮರುಭೂಮಿಯಲಿ ನಾಲ್ವತ್ತು ವರ್ಷ ಅಲ್ಲವರಿಗಿರಲಿಲ್ಲ ಯಾವುದೊಂದು ಸಂಕಷ್ಟ. ಊದಿಹೋಗಲಿಲ್ಲ ಕಾಲು, ಹರಿದುಹೋಗಲಿಲ್ಲ ಅವರ ವಸ್ತ್ರ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.


ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,


ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು. ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘ ಪ್ರಯಾಣದಿಂದ ಸವೆದುಹೋಗಿವೆ,” ಎಂದು ವಿವರಿಸಿದರು.


ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.


ಫರೋಹನೊಡನೆ ಮಾತುಕತೆ ನಡೆಸಿದಾಗ ಮೋಶೆಗೆ ಎಂಬತ್ತು, ಆರೋನನಿಗೆ ಎಂಬತ್ತಮೂರು ವರ್ಷ ವಯಸ್ಸಾಗಿತ್ತು.


ನಿಮ್ಮ ಮಕ್ಕಳು ನೀವು ಮಾಡಿದ ದ್ರೋಹದ ಫಲವನ್ನು ಅನುಭವಿಸುವವರಾಗಿ ನಾಲ್ವತ್ತು ವರ್ಷ ಮರುಭೂಮಿಯಲ್ಲೇ ಅಲೆದಾಡುವರು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.


ಸುರಿಸಿದನು ಅವರ ಮೇಲೆ ಉಣಲು ಅನ್ನವನು I ಅನುಗ್ರಹಿಸಿದನು ಸ್ವರ್ಗದ ದವಸಧಾನ್ಯವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು