Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮಲ್ಲಿ ಆಹಾರವಿರಲಿಲ್ಲ; ಕುಡಿಯಲು ದ್ರಾಕ್ಷಾರಸವಾಗಲಿ ಪಾನೀಯವಾಗಲಿ ಇರಲಿಲ್ಲ. ಆದರೆ ಯೆಹೋವನು ಮನ್ನವನ್ನು ಮತ್ತು ನೀರನ್ನು ಕೊಟ್ಟನು. ಆತನೇ ನಿಮ್ಮ ದೇವರಾದ ಯೆಹೋವನೆಂದು ನೀವು ಅರಿತುಕೊಳ್ಳುವ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವ ದೇವರೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:6
14 ತಿಳಿವುಗಳ ಹೋಲಿಕೆ  

ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.


ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.


ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.


ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.


ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸ ಸೀಹೋನನೂ ಬಾಷಾನಿನ ಅರಸ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬಂದರು.


ನಮ್ಮ ದೇವರಾದ ಸರ್ವೇಶ್ವರ ಅವನನ್ನು ನಮ್ಮಿಂದ ಪರಾಜಯ ಪಡಿಸಿದರು. ನಾವು ಅವನನ್ನು, ಅವನ ಮಕ್ಕಳನ್ನು ಹಾಗು ಜನರೆಲ್ಲರನ್ನು ಸದೆಬಡಿದೆವು.


“ಬಾಷಾನಿನ ಅರಸ ಓಗನು ಹಾಗು ಅವನ ಜನರೆಲ್ಲರು ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಸರ್ವೇಶ್ವರ ಮಾಡಿದರು. ಅವರಲ್ಲಿ ಒಬ್ಬರಾದರು ಉಳಿಯದಂತೆ ಅವರನ್ನು ಹತಮಾಡಿದೆವು.


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು