Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:9 - ಕನ್ನಡ ಸತ್ಯವೇದವು C.L. Bible (BSI)

9 ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ನಿಬಂಧನವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ದೇವರೊಡನೆ ಮಾಡಿದ ಒಪ್ಪಂದವನ್ನು ಪಾಲಿಸುತ್ತಾ ಬಂದರೆ ನೀವು ನಿಮ್ಮ ಕಾರ್ಯಗಳಲ್ಲಿ ಜಯವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:9
19 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.


ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:


ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


“ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,


ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು.


ನಮ್ಮ ಪೂರ್ವಿಕರ ಸಂಗಡ ಈ ಒಡಂಬಡಿಕೆಯನ್ನು ಮಾಡದೆ ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡವೇ ಇದನ್ನು ಮಾಡಿದರು.


ಜನರೆಲ್ಲರು ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀ ಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗುವರು. ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ಎಲ್ಲ ಯೆಹೂದ್ಯರೂ ಅವರ ಮಡದಿಮಕ್ಕಳೂ ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು