ಧರ್ಮೋಪದೇಶಕಾಂಡ 3:17 - ಕನ್ನಡ ಸತ್ಯವೇದವು C.L. Bible (BSI)17 ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಲ್ಲದೆ ಅರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರ ಮೊದಲುಗೊಂಡು ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣ ಸಮುದ್ರದವರೆಗೆ ಯೊರ್ದನ್ ಹೊಳೆಯು ಅವರ [ಪಶ್ಚಿಮ] ಮೇರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು. ಅಧ್ಯಾಯವನ್ನು ನೋಡಿ |