Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನು ನನಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತಜನರನ್ನೂ ದೇಶವನ್ನೂ ನಿನ್ನ ಕೈವಶ ಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನು ನನಗೆ, ‘ಓಗನಿಗೆ ನೀನು ಭಯಪಡಬೇಡ. ಅವನನ್ನೂ ಅವನ ಜನರನ್ನೂ ಅವನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಜನಾದ ಸೀಹೋನನನ್ನು ಸೋಲಿಸಿದಂತೆಯೇ ಇವನನ್ನೂ ಸೋಲಿಸುವೆ’ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:2
15 ತಿಳಿವುಗಳ ಹೋಲಿಕೆ  

ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


“ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋದೆವು. ಆಗ ಬಾಷಾನಿನ ಅರಸ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟು ಬಂದನು.


“ಬಾಷಾನಿನ ಅರಸ ಓಗನು ಹಾಗು ಅವನ ಜನರೆಲ್ಲರು ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಸರ್ವೇಶ್ವರ ಮಾಡಿದರು. ಅವರಲ್ಲಿ ಒಬ್ಬರಾದರು ಉಳಿಯದಂತೆ ಅವರನ್ನು ಹತಮಾಡಿದೆವು.


ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು