ಧರ್ಮೋಪದೇಶಕಾಂಡ 3:21 - ಕನ್ನಡ ಸತ್ಯವೇದವು C.L. Bible (BSI)21 “ಆ ಕಾಲದಲ್ಲಿ ನಾನು ಯೆಹೋಶುವನಿಗೆ, ‘ನಿಮ್ಮ ದೇವರಾದ ಸರ್ವೇಶ್ವರ ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನೇ ನೋಡಿರುವೆ. ನೀನು ನದಿ ದಾಟಿಹೋಗುವ ಎಲ್ಲ ರಾಜ್ಯಗಳನ್ನೂ ಅವರು ಹಾಗೆಯೇ ನಾಶಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಕಾಲದಲ್ಲಿ ನಾನು ಯೆಹೋಶುವನಿಗೆ - ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ಹೊಳೇ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಆಗ ನಾನು ಯೆಹೋಶುವನಿಗೆ, ‘ಈ ಇಬ್ಬರು ಅರಸರಿಗೆ ಯೆಹೋವನು ಮಾಡಿದ್ದನ್ನು ಕಣ್ಣಾರೆ ನೋಡಿರುವೆ. ಆತನು ಅದೇ ಪ್ರಕಾರ ನೀವು ಈಗ ಪ್ರವೇಶಿಸುವ ದೇಶಗಳಿಗೂ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು. ಅಧ್ಯಾಯವನ್ನು ನೋಡಿ |