Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:25 - ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕರ್ತನೇ, ನಾನೂ ಈ ಹೊಳೆಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ ಲೆಬನೋನ್ ಪರ್ವತವನ್ನೂ ನೋಡುವದಕ್ಕೆ ಅಪ್ಪಣೆಯಾಗಲಿ ಎಂದು ಬಿನ್ನೈಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಜೋರ್ಡನ್ ನದಿ ದಾಟಿ, ನೀನು ನಮಗೆ ಕೊಡುವ ಉತ್ತಮವಾದ ದೇಶವನ್ನು ನಾನು ನೋಡುವಂತೆ ಮಾಡು. ಅದರ ಮನೋಹರವಾದ ಬೆಟ್ಟಪ್ರದೇಶಗಳನ್ನೂ ಲೆಬನೋನ್ ಪ್ರಾಂತ್ಯಗಳನ್ನೂ ನೋಡುವಂತೆ ಮಾಡು’ ಎಂದು ಬೇಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:25
6 ತಿಳಿವುಗಳ ಹೋಲಿಕೆ  

ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಆದಕಾರಣ ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಜೋರ್ಡನ್ ನದಿಯ ಆಚೆಗೆ ಬರಮಾಡಬೇಡಿ. ಈ ಪ್ರದೇಶವನ್ನೇ ಸೊತ್ತಾಗಿ ಕೊಡಿ,” ಎಂದು ಕೇಳಿಕೊಂಡರು.


ಆದರೆ ಸರ್ವೇಶ್ವರ ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಗೊಂಡರು. ನನ್ನ ಮನವಿಯನ್ನು ಕೇಳದೆ, ‘ಸಾಕು; ಇದರ ಬಗ್ಗೆ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಜೋರ್ಡನ್ ನದಿಯನ್ನು ದಾಟಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು