Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:26 - ಕನ್ನಡ ಸತ್ಯವೇದವು C.L. Bible (BSI)

26 ಆದರೆ ಸರ್ವೇಶ್ವರ ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಗೊಂಡರು. ನನ್ನ ಮನವಿಯನ್ನು ಕೇಳದೆ, ‘ಸಾಕು; ಇದರ ಬಗ್ಗೆ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಜೋರ್ಡನ್ ನದಿಯನ್ನು ದಾಟಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ - ಸಾಕು; ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಯೊರ್ದನ್ ಹೊಳೆಯನ್ನು ದಾಟಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆದರೆ ನಿಮ್ಮ ಕಾರಣದಿಂದ ಯೆಹೋವನು ನನ್ನ ಮೇಲೆ ಕೋಪಗೊಂಡಿದ್ದನು. ಆತನು ನನಗೆ ಕಿವಿಗೊಡಲಿಲ್ಲ. ಆತನು ನನಗೆ ಹೇಳಿದ್ದೇನೆಂದರೆ: ‘ಅಷ್ಟೇ ಸಾಕು! ಇನ್ನು ಈ ವಿಷಯವನ್ನು ನೀನು ಎತ್ತಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:26
15 ತಿಳಿವುಗಳ ಹೋಲಿಕೆ  

ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ;


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.


ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು