Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:3 - ಕನ್ನಡ ಸತ್ಯವೇದವು C.L. Bible (BSI)

3 “ಬಾಷಾನಿನ ಅರಸ ಓಗನು ಹಾಗು ಅವನ ಜನರೆಲ್ಲರು ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಸರ್ವೇಶ್ವರ ಮಾಡಿದರು. ಅವರಲ್ಲಿ ಒಬ್ಬರಾದರು ಉಳಿಯದಂತೆ ಅವರನ್ನು ಹತಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತು ಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅದೇ ಪ್ರಕಾರ ನಾವು ಓಗನನ್ನು ಸೋಲಿಸುವಂತೆ ದೇವರಾದ ಯೆಹೋವನು ಸಹಾಯ ಮಾಡಿದನು. ಅವನನ್ನೂ ಅವನ ಸೈನದಲ್ಲಿರುವವರನ್ನೆಲ್ಲಾ ನಾಶಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಪ್ರಕಾರ ನಮ್ಮ ದೇವರಾದ ಯೆಹೋವ ದೇವರು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲರನ್ನೂ ನಮ್ಮ ಕೈಗಳಲ್ಲಿ ಒಪ್ಪಿಸಿದರು. ಒಬ್ಬನಾದರೂ ತಪ್ಪಿಸಿಕೊಂಡು ಬದುಕುಳಿಯದಂತೆ ಅವರನ್ನು ಹೊಡೆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:3
9 ತಿಳಿವುಗಳ ಹೋಲಿಕೆ  

ಹಾಗೆಯೇ ಇಸ್ರಯೇಲರು ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ, ಒಬ್ಬನನ್ನೂ ಬಿಡದೆ ಕೊಂದು ಅವನ ನಾಡನ್ನು ಸ್ವಾಧೀನಪಡಿಸಿಕೊಂಡರು.


ಮನಸ್ಸೆ ಕುಲದ ಅರ್ಧಕುಲಗಳಿಗೆ ಮೋಶೆ ಕೊಟ್ಟನು, ಯಾಯಿರನ ಗ್ರಾಮಗಳೆನಿಸಿಕೊಳ್ಳುವ ಅರವತ್ತು ಊರುಗಳು ಇದರಲ್ಲೆ ಇವೆ.


ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾ ನಗರದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು. ಮೋಶೆಯೇ ಅವರನ್ನು ಜಯಿಸಿ ಅವರ ನಾಡುಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು.


ಅಂದು ಅವನ ಎಲ್ಲ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.


ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸ ಓಗನ ರಾಜ್ಯವನ್ನೂ ಜೋರ್ಡನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನೂ ಗೆದ್ದುಕೊಂಡಿದ್ದರು.


ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.


ಬಾಷಾನಿನ ಅರಸನಾದ ಓಗನನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು