Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:5 - ಕನ್ನಡ ಸತ್ಯವೇದವು C.L. Bible (BSI)

5 ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆ, ಬಾಗಿಲು, ಅಗುಳಿಗಳಿಂದ ಭದ್ರವಾಗಿದ್ದವು. ಅವುಗಳಲ್ಲದೆ ಬಯಲುಸೀಮೆಯ ಪಟ್ಟಣಗಳು ಬಹಳ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:5
8 ತಿಳಿವುಗಳ ಹೋಲಿಕೆ  

ಇಸ್ರಯೇಲರು ಏಳು ದಿನಗಳವರೆಗೆ ಜೆರಿಕೊ ಪಟ್ಟಣದ ಕೋಟೆಯನ್ನು ಪ್ರದಕ್ಷಿಣೆಮಾಡಿ ಬಂದ ನಂತರ ಅವು ತಮ್ಮಷ್ಟಕ್ಕೆ ತಾವೇ ಕುಸಿದು ಬಿದ್ದುದಕ್ಕೆ ಕಾರಣ ಆ ವಿಶ್ವಾಸವೇ.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.


ಅಂತೆಯೇ ಆ ನಾಡಿನ ನಿವಾಸಿಗಳು ಬಲಿಷ್ಠರು. ಅವರಿರುವ ಪಟ್ಟಣಗಳು ದೊಡ್ಡವು; ಅವು ಕೋಟೆ ಕೊತ್ತಲುಗಳಿಂದ ಕೂಡಿವೆ. ಅದೂ ಅಲ್ಲದೆ ಅಲ್ಲಿ ‘ಅನಕಿಮ್’ ವಂಶಸ್ಥರನ್ನು ಕಂಡೆವು.


ಅಂದು ಅವನ ಎಲ್ಲ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.


ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ರಾಜರ ಅಧೀನದಲ್ಲಿದ್ದ ಎಲ್ಲ ಪುಟ್ಟ ಗ್ರಾಮಗಳ ಹಾಗು ಕೋಟೆಪೇಟೆಗಳ ಸಂಖ್ಯೆಗೆ ಸರಿಯಾಗಿದ್ದವು. ಸರ್ವೇಶ್ವರನ ಮಂಜೂಷವನ್ನು ಇಡಲಾಗಿದ್ದ ಆ ದೊಡ್ಡ ಕಲ್ಲು ಇಂದಿನವರೆಗೂ ಬೇತ್ ಷೆಮೆಷಿನ ಯೆಹೋಶುವಿನ ಹೊಲದಲ್ಲಿ ಸಾಕ್ಷಿಯಾಗಿ ನಿಂತಿದೆ.


ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.


ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು