Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:13 - ಕನ್ನಡ ಸತ್ಯವೇದವು C.L. Bible (BSI)

13 ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು ಅಂದುಕೊಳ್ಳುವದಕ್ಕೆ ಆಸ್ಪದವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದು ಸಮುದ್ರದ ಆಚೆ ಇರುವ ಮಾತಲ್ಲ, ‘ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವವರು ಯಾರಿರುವರು? ನಾವದನ್ನು ಕೇಳಿ ಅದರಂತೆ ನಡೆಯಬಹುದಾಗಿತ್ತು’ ಎಂದು ಹೇಳುವ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:13
13 ತಿಳಿವುಗಳ ಹೋಲಿಕೆ  

ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ.


ಇದು ಮೇಲಣ ಲೋಕದಲ್ಲಿರುವ ಮಾತಲ್ಲ, ‘ನಮಗಾಗಿ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.


ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿ ಇದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು