Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:14 - ಕನ್ನಡ ಸತ್ಯವೇದವು C.L. Bible (BSI)

14 ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿ ಇದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ವಾಕ್ಯವು ನಿಮಗೆ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವದಕ್ಕೆ ಅವಕಾಶವುಂಟಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರ ನುಡಿಯು ನಿಮ್ಮ ಬಳಿಯಲ್ಲಿಯೇ ಇದೆ. ಅದು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ. ಆದ್ದರಿಂದ ಅವುಗಳಿಗೆ ಕಷ್ಟವಿಲ್ಲದೆ ವಿಧೇಯರಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ವಾಕ್ಯವು ನಿಮಗೆ ಬಹಳ ಸಮೀಪವಾಗಿದೆ. ಅದನ್ನು ಕೈಗೊಳ್ಳುವ ಹಾಗೆ ವಾಕ್ಯವು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:14
14 ತಿಳಿವುಗಳ ಹೋಲಿಕೆ  

ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.


“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.


ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.”


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.


“ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು