Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:19 - ಕನ್ನಡ ಸತ್ಯವೇದವು C.L. Bible (BSI)

19 ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:19
33 ತಿಳಿವುಗಳ ಹೋಲಿಕೆ  

“ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


“ಇಗೋ ನೋಡಿ, ಈ ದಿನ ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.


ಆರಿಸಿಕೊಂಡಿರುವೆನು ನಾನು ಸತ್ಯಮಾರ್ಗವನು I ಇರಿಸಿಕೊಂಡಿಹೆನು ಕಣ್ಮುಂದೆ ನಿನ್ನ ವಿಧಿಗಳನು II


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ಆರಿಸಿಕೊಂಡೆ ನಿನ್ನ ನಿಯಮಗಳನು I ನಿನ್ನ ಕೈ ನೀಡಲಿ ನನಗೆ ನೆರವನು II


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.


ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.


“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.


“ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.


ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.


ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು