ಧರ್ಮೋಪದೇಶಕಾಂಡ 30:2 - ಕನ್ನಡ ಸತ್ಯವೇದವು C.L. Bible (BSI)2 ನಿಮ್ಮ ಮಕ್ಕಳು ಸಹಿತವಾಗಿ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯಕ್ಕೆ ಮರಳಿಬಂದು ನಾನು ಈಗ ನಿಮಗೆ ಬೋಧಿಸುವ ಅವರ ಮಾತುಗಳಿಗೆ ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ವಿಧೇಯರಾಗಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿಮ್ಮ ಮಕ್ಕಳ ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರುಗಿ ಬಂದು, ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ವಿಧೇಯರಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿಮ್ಮ ಮಕ್ಕಳು ಸಹಿತವಾಗಿ ನಿಮ್ಮ ದೇವರಾದ ಯೆಹೋವನ ಆಶ್ರಯಕ್ಕೆ ತಿರಿಗಿ ಬಂದು ನಾನು ಈಗ ನಿಮಗೆ ಬೋಧಿಸುವ ಆತನ ಮಾತುಗಳಿಗೆ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ವಿಧೇಯರಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವೂ ನಿಮ್ಮ ಸಂತತಿಯವರೂ ಯೆಹೋವನ ಬಳಿಗೆ ಬರುವಿರಿ. ನಿಮ್ಮ ಹೃದಯಪೂರ್ವಕವಾಗಿ ಆತನನ್ನು ಹಿಂಬಾಲಿಸುವಿರಿ ಮತ್ತು ಆಜ್ಞೆಗಳಿಗೆ ಸಂಪೂರ್ಣವಾಗಿ ವಿಧೇಯರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು, ನೀವೂ, ನಿಮ್ಮ ಮಕ್ಕಳೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾತುಗಳಿಗೆ, ನೀವು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ದೇವರಿಗೆ ವಿಧೇಯರಾಗಬೇಕು. ಅಧ್ಯಾಯವನ್ನು ನೋಡಿ |
ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.