Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:20 - ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾತಿಗೆ ವಿಧೇಯರಾಗಿರ್ರಿ, ಆತನನ್ನು ಹೊಂದಿಕೊಂಡೇ ಇರ್ರಿ. ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವದಕ್ಕೂ ಬಹುಕಾಲ ಇರುವದಕ್ಕೂ ಆತನೇ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:20
39 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಸರ್ವೇಶ್ವರನನ್ನೇ ಅಂಟಿಕೊಂಡಿರಿ.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;


“ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ,


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ಮೋಶೆ ಹೋಗಿ ಇಸ್ರಯೇಲರೆಲ್ಲರಿಗೆ ಈ ಮಾತುಗಳನ್ನು ತಿಳಿಸಿದನು:


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ಇಂತಿರಲು ಜಾಗರೂಕತೆಯಿಂದಿರಿ, ನಿಮ್ಮ ಪ್ರಾಣದಂತೆ ದೇವರಾದ ಸರ್ವೇಶ್ವರನನ್ನೇ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು