ಧರ್ಮೋಪದೇಶಕಾಂಡ 30:8 - ಕನ್ನಡ ಸತ್ಯವೇದವು C.L. Bible (BSI)8 ನೀವಾದರೋ ಸರ್ವೇಶ್ವರನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳಂತೆ ನಡೆಯುವಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಮತ್ತೆ ಯೆಹೋವನಿಗೆ ವಿಧೇಯರಾಗುವಿರಿ. ಇಂದು ನಾನು ನಿಮಗೆ ಕೊಡುವ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ನೀವು ಪುನಃ ಯೆಹೋವ ದೇವರ ಮಾತನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳಂತೆ ನಡೆಯುವಿರಿ. ಅಧ್ಯಾಯವನ್ನು ನೋಡಿ |
ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.