Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:9 - ಕನ್ನಡ ಸತ್ಯವೇದವು C.L. Bible (BSI)

9-10 ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ ಪಶು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನುಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು ಆತನು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರಿಗಿ ಸಂತೋಷಪಟ್ಟು ನಿಮಗೆ ಮೇಲನ್ನುಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೈಕೆಲಸದಲ್ಲಿಯೂ, ನಿಮ್ಮ ಗರ್ಭದ ಫಲದಲ್ಲಿಯೂ, ನಿಮ್ಮ ಪಶುಗಳ ಫಲದಲ್ಲಿಯೂ, ನಿಮ್ಮ ಭೂಮಿಯ ಫಲದಲ್ಲಿಯೂ ಅತ್ಯಂತ ಅಭಿವೃದ್ಧಿಯನ್ನು ಮಾಡುವರು. ಯೆಹೋವ ದೇವರು ನಿಮ್ಮ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿಮ್ಮಲ್ಲಿಯೂ ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:9
19 ತಿಳಿವುಗಳ ಹೋಲಿಕೆ  

ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನೀವಾದರೋ ಸರ್ವೇಶ್ವರನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳಂತೆ ನಡೆಯುವಿರಿ;


“ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.


ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು